News Paper Clippings
Sl.No
Source of Information
Subject
1
ಕನ್ನಡಪ್ರಭ 22-7-2024 ರಂದು 12ನೇ ಶತಮಾನದಲ್ಲಿ ಬಸವಣ್ಣ ಸ್ಥಾಪಿಸಿದ ವಿಶ್ವದ ಮೊದಲ ಧಾರ್ಮಿಕ ಸಂಸತ್ತು “ಅನುಭವ ಮಂಟಪ”. ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು. ವಚನ ಸಾಹಿತ್ಯದಲ್ಲಿ ಕ್ರಾಂತಿಕಾರ ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ನೇತೃತ್ವದಲ್ಲಿ ಅಲ್ಲಮಪ್ರಭು ಅವರ ಮೊದಲ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಂಸತ್ತಾದ ಅನುಭವ ಮಂಟಪ ಮೌಲ್ಯಗಳನ್ನು ಹಾಗೂ ವಿಶೇಷತೆಯನ್ನು ಎಲ್ಲರಿಗೂ ತಿಳಿಸುವ ಸಲುವಾಗಿ ಮಾನ್ಯ ಸಭಾಪತಿಯವರು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಎಲ್ಲಾ ವಿಧಾನ ಪರಿಷತ್ತಿನ ಶಾಸಕರುಗಳಿಗೆ ಅನುಭವ ಮಂಟಪದ ಛಾಯಾಚಿತ್ರವನ್ನು ಉಡುಗೊರೆಯಾಗಿ ನೀಡಿದರು.
Hosted by: National Informatics Centre, Bengaluru
copyright ? computer centre, KLCS, Vidhana Soudha, Bengaluru